Thursday, June 4, 2009

Piiangoviya cheluva krishna/ಪಿಳ್ಳಂಗೋವಿಯ ಚೆಲುವ ಕೃಷ್ಣನ

ಪಿಳ್ಳಂಗೋವಿಯ ಚೆಲುವ ಕೃಷ್ಣನ
ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿII ಪII
ಎಲ್ಲಿ ನೋಡಿದರಲ್ಲಿ ತನಿಲ್ಲ ದಿಲ್ಲವೆಂದು ಬಲ್ಲ ಜಾಣರು IIಅ.ಪII

ನಂದಗೋಪನ ಮಂದಿರಗಳ ಸಂದುಗೊಂದಿನಲಿ
ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ
ಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿ
ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿII೧ II

ಶ್ರೀ ಗುರುಕ್ತ ಸದಾ ಸುಮಂಗಳ ಯೋಗ ಯೋಗದಲಿ
ಅಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಡುವ ರಾಗ ರಾಗದಲಿII೨II

ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಕೆಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ವೀಚುಕೊಂಡದ ಪುರಂದರ ವಿಠಲನ ಲೋಚನಾಗ್ರದಲಿII೩II




Audio link:http://www.kannadaaudio.com/Songs/Devotional/SriVidyabhushana/DaasaraKritigalu/Pillangovia.ram

No comments: