ಆವಸಿರ್ಯಲಿ ನೀನು ಎನ್ನ ಮರೆತೆ
ದೇವ ಜಾನಕಿರಮಣ ಪೇಳು ರಘುಹ್ಪತಿಯೆ ಪ
ಸುರರ ಸೆರೆಯನು ಬಿಡಿಸಿ ಬಂದೆನೆಂಬ ಸಿರಿಯೆ
ಶರಧಿ ಸೇತುವೆಯ ಕಟ್ಟಿದೆನೆನ್ನುವ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ೧
ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬ ಸಿರಿಯೆ
ಮೃದ ನಿನ್ನ ಸಖನಾದನೆಂಬ ಸಿರಿಯೆ
ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬ ಸಿರಿಯೆ
ದೃಢ ವಾಗಿ ಹೇಳೆನಗೆ ದೇವಕಿ ಸುತನೆ ೨
ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದ ನೆಂಬ ಸಿರಿಯೆ
ಆ ಮಹಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ೩
ಮನುಜರೆಲ್ಲ್ರು ನಿನ್ನ ಸುತ್ತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದನೆಂಬ ಸಿರಿಯೆ
ಬಿನುಗುದೈವಗಳು ನಿನಗೆಣ್ಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆ ಪೇಳೊ ನರಹರಿಯೆ ೪
ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೆ ನಿನಗಿದು ಆವ ನಡತೆ
ಕಂತುಪಿತ ಕಾಗಿನೆಲೆಯದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷಪಡಿಸೊ ೫
No comments:
Post a Comment