Tuesday, October 6, 2009

Neene ballidanoo Hari

ನೀನೆ ಬಲ್ಲಿದನೋ ಹರಿ ನಿನ್ನ ದಾಸರು ಬಲ್ಲಿದರೋ IIಪII
ನಾನಾ ತೆರದಿ ನಿಧಾನಿಸಿ ನೋಡಲು
ನೀನೆ ಭಕ್ತರಾಧೀನನಾದ ಮೇಲೆ IIಅಪII

ಜಲಜ ಭವಾಂಡಕ್ಕೆ ಒಡೆಯ ನೀನೆಸುವೆ
ಬಲು ದೊಡ್ಡವನು ನೀನಹುದೊ
ಆಲಸದೆ ಹಗಲಿರುಳೆನ್ನದೆ ಅನುದಿನ
ಒಲಿದು ಬಲಿಯ ಮನೆಬಾಗಿಲು ಕಾಯ್ದ ಮೇಲೆ II೧II

ಖ್ಯಾತಿಯಿಂದಲಿ ಪುರುಹೂತಸಹಿತ ಸುರ
ವ್ರಾತವು ನಿನ್ನನ್ನು ಓಲೈಸಲು
ಭೂತಳದೊಳು ಸಂಪ್ರೀತಿಗೆ ಸಲುಕಿ ನೀ
ಪರ್ಥನ ರಥಕೆ ಸೂತನಾದ ಮೇಲೆ II೨II

ಪರಮಪುರುಷ ಪರಬೊಮ್ಮ ನೀನೆನುತಲಿ
ನಿರತ ಶ್ರುತಿಯು ಕೊಂಡಾಡುತಿರೆ

ವರ ಪಂಡವರ ಮನೆಯೊಳಿಗ ಮಾಡ್ವರು
ಕರೆಕರೆದಲ್ಲಿಗೆ ಪೋಗಿ ಕಾಯ್ದ ಮೇಲೆ II೩II

ಧುರದಲ್ಲಿ ಪಣೆಗೆ ಹೊಡೆಯಲು ಭೀಷ್ಮನು ಸಂ
ಹರಿಪೆನೆನುತ ಚ್ಕ್ರ ಝಳಿಸುತ
ಭರದಿಂದ ಬರಲಿಲ್ಲ ಹರಿನಾಮ ಬಲವಿರೆ
ಪರಕಿಸಿ ನೋಡಿ ಸುಮ್ಮನೆ ತಿರುಗಿದ ಮೇಲೆII ೪II

ತರಳ ಕರೆಯಲು ನೀ ತ್ವರಿತದಿ ಕಂಬದಿ ನಂದು
ನರಮೃಗರೂಪದಿಂದವನ ಕಾಯ್ದೆ
ವರಗಳೀವ ಪುರಂದರ ವಿಠಲ ನಿನ್ನ
ಸ್ಮರಿಪರ ಮನದಲ್ಲಿ ಸೆರೆಯ ಸಿಕ್ಕಿದ ಮೇಲೆ II೫II

No comments: