ಭೂಷಣಕೆ ಭೂಷಣ ಇದು ಭೂಷಣ
ಶೇಷಗಿರಿವಾಸ ಶ್ರೀವರವೆಂಕಟೇಶ IIಪII
ನಾಲಿಗೆಗೆ ಭೂಷಣ ನಾರಾಯಣ ನಾಮ
ಕಾಲಿಗೆ ಭೂಷಣ ಹರಿಯಾತ್ರೆಯು
ಆಲಯಕೆ ಭೂಷಣ ತುಲಸಿವೃಂದವನ
ವ್ಶಾಲ ಕರ್ಣಕೆ ಭೂಷಣ ವಿಷ್ಣುಕಥೆಯು II೧II
ದಾನವೇ ಭೂಷಣ ಇರುವ ಹಸ್ತಂಗಳಿಗೆ
ಮಾನವೇ ಭೂಷಣ ಮಾನವರಿಗೆ
ಜ್ಞಾನವೇ ಭೂಷಣ ಮುನಿಯೊಗಿವರರಿಗೆ
ಮಾನಿನಿಗೆ ಭೂಷಣ ಪತಿಭಕ್ತಿಯು II೨II
ರಂಗನನು ನೋಡುವುದೆ ಕಂಗಳಿಗೆ ಭೂಷಣ
ಮಂಗಳಾಂಗಿಗೆ ಮಣಿವ ಶಿರ ಭೂಷಣ
ಶೃಂಗರ ತುಲಸಿಮಣಿ ಕೊರಳಿಗೆ ಭೂಷಣ
ರಂಗವಿಠಲ ನಿಮ್ಮ ನಾಮ ಅತಿ ಭೂಷಣ II೩II
Posted On Aug 10 2009
Excellent.lyrics share maadidakke tumba dhanyavaadagalu..Plz innu hechchu hari naama padagala lyrics na share maadi..God bless u
ReplyDelete