ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲೆಲ್ಲಿ ನೋಡಿದರು ಅಲ್ಲಿ ಶ್ರೀರಾಮ IIಪII
ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೇ ಬೆದರಿ ಓಡಿದವು
ಈ ವೇಳೆ ನರನಾಗಿ ಇರಬಾರದೆ೦ದೆಣಿಸಿ
ದೇವ ರಾಮಚಂದ್ರ ಜಗವೆಲ್ಲ ತಾನಾದ II೧II
ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೂಳಿಪರಿ ರುಪವು೦ಟೆ
ಲವದಲ್ಲಿ ಅಸುರ ದುರುಳರೆಲ್ಲರು
ಅವರವರು ಅಸುರ ದುರುಳರೆಲ್ಲರು II೨II
ಹನುಮದಾದಿ ಸಾಧು ಜನರು ಅಪ್ಪಿಕೊಂಡು
ಕುಣಿಕುಣಿದಾಡಿದರು ಹರುಷದಿಂದ
ಕ್ಷಣದಲ್ಲಿ ಪುರಂದರವಿಠಲರಾಯನು
ಕೂನೆಗೂಡೆಯನು ತಾನೋಬ್ಬನಾಗಿ ನಿಂತ II೩II
No comments:
Post a Comment